ಬೆಂಗಳೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ನಿಯೋಗ ಮನವಿ ಮಾಡಿಕೊಂಡಿದೆ.
ಸಿ.ಟಿ.ರವಿ ಬಂಧನ ಪ್ರಕರಣದಲ್ಲಿ ಸತ್ಯ ಶೋಧನೆ ನಡೆಸಲು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ಬಿಜೆಪಿ ಎಂಎಲ್‌ಸಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಖಂಡನೀಯ. ಸಾಂವಿಧಾನಿಕ ಹಾಗೂ ಕಾನೂನು ಉಲ್ಲಂಘನೆ ಆಗಿದೆ. ಪೊಲೀಸ್ ಇಲಾಖೆ ಮೂಲಕ ಅಧಿಕಾರ ದುರ್ಬಳಕೆ ಆಗಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಬಂಧನ ಪ್ರಕರಣದಲ್ಲಿ ಸತ್ಯ ಶೋಧನೆ ನಡೆಸಬೇಕು ಎಂದು ಮನವಿ ಸಲ್ಲಿಸಿದೆ.