ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತೂರು ಗ್ರಾಮದ ಶ್ರೀ ಮಂಜುನಾಥೇಶ್ವರ ವಿಧ್ಯಾ ಸಂಸ್ಥೆಯಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಸಂಸ್ಥೆಯ ಕಾರ್ಯದರ್ಶಿ ಹಾಗು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಜಯಕುಮಾರ್ ಮಾತನಾಡಿ ಮಕ್ಕಳಲ್ಲಿ ಶಿಕ್ಷಣದ ಜತೆ ವ್ಯವಹಾರಿಕ ಜ್ಞಾನ ಬೆಳೆಯಬೇಕು, ನಾಲ್ಕು ಗೋಡೆ ನಡುವಿನ ಶಿಕ್ಷಣ ಮಾನಸಿಕವಾಗಿ ಮಕ್ಕಳನ್ನು ಸಜ್ಜುಗೊಳಿಸಿದರೆ ಹೊರಗಿನ ಶಿಕ್ಷಣ ಮಕ್ಕಳನ್ನು ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಿಸುತ್ತದೆ, ಮಕ್ಕಳಿಗೆ ಪಠ್ಯದ ಜತೆಗ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಬಾಹ್ಯ ಶಿಕ್ಷಣ ನೀಡಬೇಕು ಎನ್ನುವುದು ಸಂಸ್ಥೆಯ ಉದ್ದೇಶವಾಗಿದೆ, ಈ ಹಿನ್ನೆಲೆ ಮಕ್ಕಳ ಸಂತೆ ಆಯೋಜಿಸಲಾಗಿದೆ
ಎಂದರು.
ಮಕ್ಕಳ ಸಂತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಬಗೆ ಬಗೆಯ ತಿಂಡಿ ತಿನಿಸು ತರಕಾರಿ ಸೊಪ್ಪು ಗೃಹಪಯೋಗಿ ವಸ್ತುಗಳನ್ನು ಮಾರಾಟ ಮಾಡಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭ ಶಾಲಾ ಮುಖ್ಯಸ್ಥರಾದ ದಮಯಂತಿ ಚೌಡಯ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್, ಮುಕ್ಯೋಪಾಧ್ಯಾಯರಾದ ಮಹೇಶ್, ಪೋಷಕರು, ಶಿಕ್ಷಕರು ಇದ್ದರು.