Sunday, April 20, 2025
Google search engine

Homeಅಪರಾಧಒಬಾಮ ಭಾರತ ಭೇಟಿ ವೇಳೆ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳದ ಐಎಂ ಉಗ್ರರಿಗೆ 10 ವರ್ಷ...

ಒಬಾಮ ಭಾರತ ಭೇಟಿ ವೇಳೆ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳದ ಐಎಂ ಉಗ್ರರಿಗೆ 10 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭಾರತ ಭೇಟಿ ವೇಳೆ ಬಾಂಬ್ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳ ಮೂಲದ ಮೂವರು ಇಂಡಿಯನ್ ಮುಜಾಹಿದ್ದೀನ್ (ಐಎಂ) ಉಗ್ರರಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ 10 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2015ರಲ್ಲಿ ಗಣರಾಜ್ಯೋತ್ಸವ ಸಮಾರಂಭದ ವೇಳೆ ಆಗಿನ ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ ಅವರು ಭಾರತಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭ ಸ್ಫೋಟ ನಡೆಸಲು ಸಂಚು ಹೂಡಿದ್ದ ಪ್ರಕರಣದಲ್ಲಿ ಇವರನ್ನು ದೋಷಿ ಎಂದು ಕೆಲ ದಿನಗಳ ಹಿಂದಷ್ಟೇ ಕೋರ್ಟ್ ತೀರ್ಪು ನೀಡಿ, ಶಿಕ್ಷೆಯ ಪ್ರಮಾಣ ಕಾಯ್ದಿರಿಸಿತ್ತು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಮೂವರು ಅಪರಾಧಿಗಳು ಪಾಕಿಸ್ತಾನದ ಆಣತಿಯಂತೆ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದರು. ಎನ್‌ಐಎ ವಿಶೇಷ ನ್ಯಾಯಾಲಯವು ಅಫಾಕ್‌ಗೆ 1.55 ಲಕ್ಷ ರೂಪಾಯಿ, ಸಬೂರ್ ಮತ್ತು ಹುಸೇನ್‌ಗೆ ತಲಾ 95,000 ರೂಪಾಯಿ ದಂಡ ವಿಧಿಸಿದೆ. ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೂವರಿಗೆ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ ಭಟ್ಕಳದ ರಿಯಾಜ್ ಅಹಮದ್ ಸಯೀದಿ ಮತ್ತು ಜೈನುಲ್ಲಾಬುದ್ದೀನ್ ಅವರನ್ನು ಖುಲಾಸೆಗೊಳಿಸಲಾಗಿತ್ತು. ಇತರ ಆರೋಪಿಗಳಾದ ರಿಯಾಜ್ ಭಟ್ಕಳ್, ಇಕ್ಬಾಲ್ ಭಟ್ಕಳ್, ಅಲಿಫ್ ಮತ್ತು ಸಮೀರ್ ನಾಪತ್ತೆಯಾಗಿದ್ದಾರೆ.

RELATED ARTICLES
- Advertisment -
Google search engine

Most Popular