Saturday, April 19, 2025
Google search engine

Homeರಾಜಕೀಯಶಂಕಿತ ಉಗ್ರರ ಬಂಧನ: ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಶಂಕಿತ ಉಗ್ರರ ಬಂಧನ: ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು; ಅನಾಹುತ ಆಗುವ ಮುನ್ನವೇ ಶಂಕಿತ ಭಯೋತ್ಪಾದಕರನ್ನು  ಹಿಡಿದಿರುವ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕು. ಇತ್ತೀಚೆಗೆ ರಸ್ತೆಗಳಲ್ಲಿಯೇ ಕೊಲೆಗಳಾಗ್ತಿವೆ. ಜನರಿಗೆ ಆತಂಕ ಎದುರಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳು  ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದರು.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಸರಕಾರಕ್ಕೆ ಸಲಹೆ ಮಾಡಿದರು.     

RELATED ARTICLES
- Advertisment -
Google search engine

Most Popular