ಮಂಗಳೂರು (ದಕ್ಷಿಣ ಕನ್ನಡ): ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರವು ಈ ಸಮುದಾಯಗಳಿಗೆ ಹೊಸ ಅನುದಾನ ನೀಡಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ಬಿಡುಗಡೆಗೊಳಿಸಲಾಗಿದ್ದ ಕೋಟ್ಯಂತರ ರೂಪಾಯಿ ಅನುದಾನಗಳನ್ನು ರದ್ದುಪಡಿಸುವ ಆದೇಶ ಹೊರಡಿಸುವ ಮೂಲಕ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ಮಂಗಳೂರಲ್ಲಿರೋ ತನ್ನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳು ಕಾರ್ಯನಿರ್ವಹಿಸುತ್ತಿವೆ. ಬಿಜೆಪಿ ಸರಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 1 ಸಾವಿರ ಕೋ.ರೂ.ಗೂ ಹೆಚ್ಚು ಅನುದಾನವನ್ನು ವಿವಿಧ ನಿಗಮಗಳಿಗೆ ಬಿಡುಗಡೆ ಮಾಡಿತ್ತು. ಆದರೆ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಹೊಸ ಅನುದಾನವನ್ನು ನೀಡಿಲ್ಲ. ಬಿಜೆಪಿಯ ಅವಧಿಯಲ್ಲಿ ಬಿಡುಗಡೆಗೊಳಿಸಲಾಗಿದ್ದ ಅನುದಾನಗಳನ್ನು ರದ್ದುಪಡಿಸುವ ಆದೇಶ ಹೊರಡಿಸಿರುವುದು ಖಂಡನೀಯ ಎಂದರು.