ನವದೆಹಲಿ: ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮಯಾತ್ರೆ ಆರಂಭಗೊಂಡಿದೆ. ಇನ್ನೇನು ಕೆಲವೇ ಕ್ಷಣದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ಡಿಸೆಂಬರ್.26ರಂದು ನಿಧನರಾಗಿದ್ದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶಕ್ಕೆ ನಿನ್ನೆ, ಇಂದು ಮಾಡಲಾಗಿತ್ತು. ಇಂದು ಬೆಳಗ್ಗೆ ಎಐಸಿಸಿ ಕಚೇರಿಯಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವ ಕೆಹೆಚ್ ಮುನಿಯಪ್ಪ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವರು ಅಂತಿಮ ದರ್ಶನ ಮಾಡಿದರು.
ಗಣ್ಯರ ಅಂತಿಮ ದರ್ಶನದ ಬಳಿಕ ಎಐಸಿಸಿ ಕಚೇರಿಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭಗೊಂಡಿದೆ. ನಿಗಮ್ ಬೋಧ್ ಘಾಟ್ ಗೆ ಕೊಂಡೊಯ್ಯಲಾಗುತ್ತಿದ್ದು, ಕೆಲವೇ ಕ್ಷಣದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ.