ಯಳಂದೂರು: ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗೌಡಹಳ್ಳಿ ರವಿ ಅವಿರೋಧವಾಗಿ ಆಯ್ಕೆಯಾದರು.
ಕೃಷಿಕ ಸಮಾಜದ ತಾಲೂಕು ಮಟ್ಟದಕಾರ್ಯಕಾರಿ ಸಮಿತಿಗೆ ಈಗಾಗಲೇ ೧೫ ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದರಲ್ಲಿ ಸೋಮವಾರ ಅಧ್ಯಕ್ಷ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಮತ್ತು ಜಿಲ್ಲಾ ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ನಿಗಧಿಯಾಗಿತ್ತು.
ಕೃಷಿ ಇಲಾಖೆಯ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೂ ಒಬ್ಬೂಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಜಿ. ಅಮೃತೇಶ್ವರ್ ಅಧ್ಯಕ್ಷರಾಗಿ ಗೌಡಹಳ್ಳಿ ರವಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ವೈ.ವಿ. ಉಮಾಶಂಕರ್, ಪ್ರಧಾನ ಕಾರ್ಯದರ್ಶಿಯಾಗಿ ರಾಜು ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಮದ್ದೂರು ಶ್ರೀಕಂಠಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಗೌಡಹಳ್ಳಿ ರವಿ ಮಾತನಾಡಿ, ಕೃಷಿಕ ಸಮಾಜದ ಎಲ್ಲಾ ಪದಾಧಿಕಾರಿಗಳನ್ನು ಈ ಬಾರಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದಕ್ಕೆ ಕಾರಣರಾದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಹಾಗೂ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿರವರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ತಾಲೂಕಿನ ಕೃಷಿಕರು, ರೈತರ ಪರವಾಗಿ ನಾನು ಪ್ರಾಮಾಣಿಕವಾಗಿ ಕೆಲಸವನ್ನು ಮಾಡುತ್ತೇನೆ. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ನಿಷ್ಠೆಯಿಂದ ಕೆಲಸವನ್ನು ಮಾಡುತ್ತೇನೆ. ಎಲ್ಲಾ ರೈತರ ಪರವಾಗಿ ನಾನು ಅವರ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವ ಜೊತೆಗೆ ಎಲ್ಲಾ ನಿರ್ದೇಶಕರ ಸಹಕಾರ, ಸಹಯೋಗದೊಂದಿಗೆ ಉತ್ತಮವಾಗಿ ಕೆಲಸ ನಿರ್ವಹಿಸಲು ಪ್ರಯತ್ನಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕೃಷಿಕ ಸಮಾಜದ ನಿರ್ದೇಶಕರಾದ ಬಿ.ಪಿ. ನಾಗೇಂದ್ರಸ್ವಾಮಿ, ಬಸವಣ್ಣ, ಎಂ.ಪಿ. ಪ್ರಭುಸ್ವಾಮಿ, ಕೆ. ಶಾಂತಮೂರ್ತಿ, ಆರ್. ಸಿದ್ಧರಾಜು, ಎಂ. ಪ್ರಸನ್ನ, ನಟರಾಜು, ಎಂ. ರಾಜೇಂದ್ರಮೂರ್ತಿ, ಎ.ಬಿ. ಜಯಶಂಕರ್, ಆರ್. ಗೋವಿಂದನಾಯಕ್ ಕೃಷಿ ಅಧಿಕಾರಿ ವೆಂಕಟರಂಗಶೆಟ್ಟಿ, ಮುಖಂಡರಾದ ಕಿನಕಹಳ್ಳಿ ಪ್ರಭುಪ್ರಸಾದ್, ಪುಟ್ಟಸುಬ್ಬಪ್ಪ, ರಾಜಣ್ಣ, ಮಂಜು, ಗೌಡಹಳ್ಳಿ ಶಂಭುಲಿಂಗಪ್ಪ, ಗೌಡಹಳ್ಳಿಮನು, ಸಂತೆಮರಹಳ್ಳಿ ಮಾದಪ್ಪ, ಕೊಮರಾನಪುರ ಪುಟ್ಟರಾಜು ಸೇರಿದಂತೆ ಅನೇಕರು ಇದ್ದರು.