Sunday, April 20, 2025
Google search engine

Homeಅಪರಾಧಹುಬ್ಬಳ್ಳಿ ಸಿಲಿಂಡರ್ ಸ್ಪೋಟ: ಮತ್ತೊಬ್ಬ ಮಾಲಾಧಾರಿ ಸಾವು

ಹುಬ್ಬಳ್ಳಿ ಸಿಲಿಂಡರ್ ಸ್ಪೋಟ: ಮತ್ತೊಬ್ಬ ಮಾಲಾಧಾರಿ ಸಾವು

ಹುಬ್ಬಳ್ಳಿ: ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿ.೨೨ರಂದು ಸಿಲಿಂಡರ್ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಆ ಮೂಲಕ ಮೃತಪಟ್ಟವರ ಸಂಖ್ಯೆ ೭ಕ್ಕೇ ಏರಿಕೆ ಆಗಿದೆ.

ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತೇಜಸ್ ಸತಾರೆ(೨೬) ಕೊನೆಯುಸಿರೆಳೆದಿದ್ದಾರೆ. ಒಬ್ಬನೇ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲನಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ ೨೨ರಂದು ರಾತ್ರಿ ಸಿಲಿಂಡರ್ ಸ್ಫೋಟಗೊಂಡು ಒಂಭತ್ತು ಮಂದಿ ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ನಗರದ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಈ ಪೈಕಿ ೭ ಮಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.

RELATED ARTICLES
- Advertisment -
Google search engine

Most Popular