Saturday, April 19, 2025
Google search engine

Homeಅಪರಾಧಹುಬ್ಬಳ್ಳಿ: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ: ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ: ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಘೋಡ್ಕೆ ಪ್ಲಾಟ್‌ನಲ್ಲಿ ನಡೆದಿದ್ದ ಇಬ್ಬರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಆಪಾದಿತನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಓರ್ವನ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದಿದ್ದಾರೆ.

ಹಳೇಹುಬ್ಬಳ್ಳಿ ಘೋಡ್ಕೆ ಪ್ಲಾಟ್‌ನ ಮಜಬುಲ್ ಎಂಬಾತನೇ ಪೊಲೀಸರಿಂದ‌‌ ಗುಂಡು ಹೊಡೆಸಿಕೊಂಡವ.

ಈತನು ಕ್ಷುಲಕ ವಿಷಯವಾಗಿ ಸೋಮವಾರ ರಾತ್ರಿ ಹಳೇಹುಬ್ಬಳ್ಳಿ ಆನಂದನಗರ ರಸ್ತೆ ಘೋಡ್ಕೆ ಪ್ಲಾಟ್‌ನ ತಬ್ಲಿಕ್ ಮಸೀದಿ ಬಳಿ ಅದೇ ಪ್ರದೇಶದ ಸಮೀರ ಶೇಖ್ (18) ಹಾಗೂ ಈತನ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬುವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ.‌ ಗಾಯಾಳುಗಳು ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಆಪಾದಿತನನ್ನು ವಶಕ್ಕೆ ಪಡೆಯಲು ಹೋದಾಗ ಅವರ ಮೇಲೆ ಹಲ್ಲೆ ಮಾಡಿ ಪರಾರಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ‌ಸದ್ಯ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular