ಬೆಂಗಳೂರು : ರಾಜ್ಯಾದ್ಯಂತ 2024 ಕ್ಕೆ ಗುಡ್ ಬೈ ಹೇಳಿದ್ದು, 2025 ರ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಈ ನಡುವೆ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ. ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.