Saturday, April 19, 2025
Google search engine

Homeರಾಜ್ಯಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ವಿಚಾರ : ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲು

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ವಿಚಾರ : ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ನಿನ್ನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು. ಈ ವಿಚಾರವಾಗಿ ಇದೀಗ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೋಸ್ಟರ್ ಅಂಟಿಸಿದ ಬಿಜೆಪಿ ನಾಯಕರು ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದೆ.

ಪಿಎಸ್ಐ ಶಶಿಧರ್ ವಣ್ಣೂರ್ ದೂರು ಆಧರಿಸಿ ಇದೀಗ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಿ ಎಸ್ ಐ ಶಶಿಧರ ಅವರು ದೂರು ನೀಡಿದ್ದರು. ಹಾಗಾಗಿ ಅವರ ದೂರನ್ನು ಆಧರಿಸಿ FIR ದಾಖಲಾಗಿದೆ. ನಿನ್ನೆ ಬೆಳಿಗ್ಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು.

RELATED ARTICLES
- Advertisment -
Google search engine

Most Popular