ಮಂಗಳೂರು (ದಕ್ಷಿಣ ಕನ್ನಡ): ರಸ್ತೆ ಮಧ್ಯದಲ್ಲೇ ಕಾರೊಂದು ಹೊತ್ತಿ ಉರಿದ ಘಟನೆ ಮಂಗಳೂರಲ್ಲಿ ನಡೆದಿದೆ. ರಾತ್ರಿ ವಾಹನ ದಟ್ಟಣೆ ಹೆಚ್ಚಾಗಿದ್ದ ಸಮಯದಲ್ಲಿ ಮಂಗಳಾ ಸ್ಟೇಡಿಯಂ ಸಮೀಪ ಲೇಡಿ ಹಿಲ್ ಬಳಿ ಕಾರೊಂದು ಹೊತ್ತಿ ಉರಿದಿದೆ.
ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ರಸ್ತೆಯ ಬದಿಗೆ ತಂದು ನಿಲ್ಲಿಸುವಷ್ಟರಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದು ಚಾಲಕ ಬಚಾವ್ ಆಗಿದ್ದಾರೆ. ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಟ್ರಾಫಿಕ್ ಪೊಲೀಸರು ಕೆಲ ಕಾಲ ವಾಹನಗಳು ಈ ರಸ್ತೆಯಲ್ಲಿ ಸಂಚರಿಸದಂತೆ ನಿರ್ಬಂಧಿಸಿದ್ದಾರೆ. ಬಳಿಕ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿಕ ಕಾರಿನ ಬೆಂಕಿ ನಂದಿಸಿದ್ದಾರೆ. ಆದರೆ, ಆದಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು.