Saturday, April 19, 2025
Google search engine

Homeಸ್ಥಳೀಯಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಮೈಸೂರು ಬಂದ್ ಗೆ ಸಂಘಟನೆಗಳ ಬೆಂಬಲ

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಮೈಸೂರು ಬಂದ್ ಗೆ ಸಂಘಟನೆಗಳ ಬೆಂಬಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ. ಬಿ.ಆರ್ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯಿಂದ ನಾಳೆ ಮೈಸೂರು ಬಂದ್ ಗೆ ಕರೆ ನೀಡಲಾಗಿದ್ದು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

ನಾಳಿನ ಮೈಸೂರು ಬಂದ್ ಗೆ ಪ್ರಗತಿಪರ ಸಂಘಟನೆ, ಅಂಬೇಡ್ಕರ್ ಸಂಘ, ಪೌರ ಕಾರ್ಮಿಕರ ಸಂಘಗಳು ಬೆಂಬಲ ಸೂಚಿಸಿದ್ದು, ನಾಳೆ ಮೈಸೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗದಿರಲು ಪೌರ ಕಾರ್ಮಿಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಮೈಸೂರಿನ ಟೌನ್ ಹಾಲ್ ಮುಂಭಾಗ ವೇದಿಕೆ ನಿರ್ಮಾಣ ಮಾಡಲಾಗಿದ್ದು ಮೈಸೂರು ಬಂದ್ ಗೆ ಬೆಂಬಲ ಕೋರಿ ಸಂಘಟನೆ ಮುಖಂಡರು ಕರ ಪತ್ರ ಹಂಚುತ್ತಿದ್ದಾರೆ.

ಮೈಸೂರು ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಬಡಗಲಪುರ ನಾಗೇಂದ್ರ ಬಣ ಬೆಂಬಲ ಸೂಚಿಸಿ ಪತ್ರ ಬರೆದಿದೆ. ಇನ್ನು ಬಂದ್ ಗೆ ಮೈಸೂರು ಹೋಟೆಲ್ ಮಾಲೀಕರ ಸಂಘದಿಂದ ನೈತಿಕ ಬೆಂಬಲ ನೀಡಿದೆ. ಹೋಟೆಲ್ ಮುಚ್ಚದೆ ಬಂದ್‌ಗೆ ನೈತಿಕ ಬೆಂಬಲ ನೀಡಲಾಗುತ್ತದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣ್ ಗೌಡ ಮಾಹಿತಿ ನೀಡಿದ್ದಾರೆ. ನಮಗೆ ಬಾಬಾಸಾಹೇಬ್ ಡಾ ಬಿ. ಆರ್ ಅಂಬೇಡ್ಕರ್ ಅವರ ಬಗ್ಗೆ ಅಪಾರ ಗೌರವ ಇದೆ. ನಮ್ಮದು ಆತಿಥ್ಯದ ಉದ್ಯಮ ಅಗತ್ಯ ಸೇವೆಗಳಡಿಯಲ್ಲಿ ಬರುತ್ತದೆ. ವಿವಿಧ ರಾಜ್ಯಗಳಿಂದ ಆಗಮಿಸಿದ ಪ್ರವಾಸಿಗರಿಗೆ, ಆಸ್ಪತ್ರೆಯ ರೋಗಿಗಳಿಗೆ ಊಟೋಪಚಾರ, ಕುಡಿಯುವ ನೀರು ಅತ್ಯಂತ ಅಗತ್ಯವಾಗಿರುತ್ತದೆ . ಸೇವೆ ನೀಡುವವರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು. ಬಂದ್ ದಿನ ಕಪ್ಪು ಪಟ್ಟಿ ಧರಿಸಿ ಬಂದ್ ಗೆ ಬೆಂಬಲ ನೀಡುತ್ತೇವೆ. ಪ್ರತಿಭಟನೆಯಲ್ಲಿ ಹೋಟೆಲ್ ಮಾಲೀಕರು ಭಾಗಿಯಾಗುತ್ತಾರೆ. ಆದರೆ ಹೋಟೆಲ್ ಬಂದ್ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular