Saturday, April 19, 2025
Google search engine

Homeಸ್ಥಳೀಯಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಚಿರತೆ ಓಡಾಟ: ಟ್ರೈನಿಗಳಿಗೆ ಜ.26ರವರೆಗೆ ರಜೆ

ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಚಿರತೆ ಓಡಾಟ: ಟ್ರೈನಿಗಳಿಗೆ ಜ.26ರವರೆಗೆ ರಜೆ

ಮೈಸೂರು: ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆ ಟ್ರೈನಿ ಉದ್ಯೋಗಿಗಳಿಗೆ ಜ.26ರ ವರೆಗೆ ರಜೆ ಘೋಷಿಸಲಾಗಿದೆ.

ಕ್ಯಾಂಪಸ್ ಒಳಗೆ ಅಳವಡಿಸಲಾದ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗುತ್ತಿದೆ. ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಚಿರತೆ ಬೀಳುತ್ತಿಲ್ಲ. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಎಚ್ಚೆತ್ತ ಇನ್ಫೋಸಿಸ್ ಸಂಸ್ಥೆ, ಮುನ್ನೆಚ್ಚರಿಕಾ ಕ್ರಮವಾಗಿ ಟ್ರೈನಿ ಉದ್ಯೋಗಿಗಳಿಗೆ ರಜೆ ಘೋಷಿಸಿದೆ.

ಕ್ಯಾಂಪಸ್‍ನಲ್ಲಿ ಕಳೆದ ಡಿ.31 ರಂದು ಚಿರತೆ ಕಾಣಿಸಿಕೊಂಡಿತ್ತು. ಇದಾದ ಬಳಿಕ ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿತ್ತು.

RELATED ARTICLES
- Advertisment -
Google search engine

Most Popular