Sunday, April 20, 2025
Google search engine

Homeರಾಜ್ಯಮದ್ಯದ ದರ ಹೆಚ್ಚಳ ಮಾಡುವುದಿಲ್ಲ, ಬಿಯರ್ ಬೆಲೆ ಏರಿಕೆ ಬಗ್ಗೆ ಚರ್ಚೆ : ಸಚಿವ ಆರ್.ಬಿ....

ಮದ್ಯದ ದರ ಹೆಚ್ಚಳ ಮಾಡುವುದಿಲ್ಲ, ಬಿಯರ್ ಬೆಲೆ ಏರಿಕೆ ಬಗ್ಗೆ ಚರ್ಚೆ : ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ

ಮುಧೋಳ: ನಾವು ಯಾವುದೇ‌ ರೀತಿಯ ಮದ್ಯದ ದರ ಹೆಚ್ಚಳ ಮಾಡುವುದಿಲ್ಲ. ಕೇವಲ ಬಿಯರ್ ಬೆಲೆ ಏರಿಕೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಅಬಕಾರಿ‌ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಯರ್ ನಲ್ಲಿ 25 ಶೇ. ರಷ್ಟು ಹಾಗೂ ಅದಕ್ಕಿಂತ ಹೆಚ್ಚಿನ ಸಕ್ಕರೆ ಅಂಶವಿದ್ದರೆ ಅದು ಹಾನಿಕಾರಕ. ಈ‌ ಹಿನ್ನೆಲೆ‌ ಸಕ್ಕರೆ ಅಂಶವನ್ನು ಕಡಿಮೆ‌‌ ಮಾಡಿ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

ಅನ್ಯ ರಾಜ್ಯದಲ್ಲಿ ಬಿಯರ್ ದರದ ಬಗ್ಗೆ ಮಾಹಿತಿ‌ ಪಡೆದು ಯಾವ ರೀತಿಯ ಕ್ರಮ‌ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸುತ್ತೇವೆ. ನಾವು ಕೇವಲ ದರ ಏರಿಕೆಯನ್ನಷ್ಟೇ ಮಾಡಿಲ್ಲ, ಪ್ರೀಮಿಯಂ ಬಿಯರ್ ದರವನ್ನು ಕಡಿಮೆ ಮಾಡಿದ್ದೇವೆ. ಇದರ ಬಗ್ಗೆ ಯಾರು ಮಾತನಾಡುವುದಿಲ್ಲ‌ ಎಂದರು.

ಚಾಲುಕ್ಯ ಉತ್ಸವ ಮಾಡುತ್ತೇವೆ: ಫೆಬ್ರವರಿಯಲ್ಲಿ ರನ್ನ ಉತ್ಸವ ಅದ್ದೂರಿಯಾಗಿ ನಡೆಯಲಿದೆ. ಅದೇ ಮಾದರಿಯಲ್ಲಿ ಚಾಲುಕ್ಯ ಉತ್ಸವವೂ ನಡೆಯಲಿದೆ. ಶೀಘ್ರದಲ್ಲಿ ಶಾಸಕರೊಂದಿಗೆ ಚರ್ಚೆ ಮಾಡಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ ಎಂದು ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular