Saturday, April 19, 2025
Google search engine

Homeಅಪರಾಧಶರಣಾದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಶರಣಾದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಚಿಕ್ಕಮಗಳೂರು: ಶರಣಾದ ಆರು ಮಂದಿ ನಕ್ಸಲರು ಬಳಸುತ್ತಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಚಿಕ್ಕಮಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೂತು ಇಟ್ಟಿದ್ದರು. ನಕ್ಸಲರು ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ ಸಭೆ ನಡೆಸಿ, ಬಳಿಕ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು ಎನ್ನಲಾಗಿದೆ. ಶರಣಾಗತಿ ವೇಳೆ ಶಸ್ತ್ರಾಸ್ತ್ರ ಹಸ್ತಾಂತರ ಬಗ್ಗೆ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಹುಡುಕಾಟ ನಡೆಸಿ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿದೆ. ನಕ್ಸಲರು ಶರಣಾಗುವ ಮುನ್ನ ಕೊನೆಯಬಾರಿಗೆ ಸಭೆ ನಡೆಸಿದ್ದ ಸ್ಥಳದಲ್ಲೇ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಒಂದು AK 56, ಮೂರು 303 ರೈಫಲ್, ಒಂದು 12 bore SBBL, ಒಂದು ಕಂಟ್ರಿ ಮೇಡ್ ಪಿಸ್ತೂಲ್ ಸೇರಿಂದತೆ ಒಟ್ಟು 6 ಬಂದೂಕು ಪತ್ತೆಯಾಗಿವೆ. ಜೊತೆಗೆ ಹನ್ನೊಂದು 7.62ಎಂಎಂ AK ammunitions , ೩೦೩ ಬಂದೂಕಿನ 133 ಗುಂಡುಗಳು ಸೇರಿದಂತೆ 176 ಜೀವಂತ ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ 25(1ಬಿ), 7 ಮತ್ತು 25(1ಎ) ಶಸ್ತ್ರಾಸ್ತ್ರ ಕಾಯ್ದೆ 1959 ಅಡಿ ಪ್ರಕರಣ ದಾಖಲಾಗಿರುತ್ತದೆ.

RELATED ARTICLES
- Advertisment -
Google search engine

Most Popular