Monday, April 21, 2025
Google search engine

Homeರಾಜ್ಯಸಿಟಿ ರವಿ ಪ್ರಕರಣ ಸಿಐಡಿಗೆ ವಹಿಸಿದ ಸರ್ಕಾರದ ಕ್ರಮಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ಷೇಪ

ಸಿಟಿ ರವಿ ಪ್ರಕರಣ ಸಿಐಡಿಗೆ ವಹಿಸಿದ ಸರ್ಕಾರದ ಕ್ರಮಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ಷೇಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿರುವ ಸರ್ಕಾರದ ಕ್ರಮಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಚಿವ ಜಿ. ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ. ಸಿಟಿ ರವಿ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿಗೆ ವಹಿಸಲಾಗಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಸದನದಲ್ಲಿ ನಡೆದ ಘಟನೆಯ ಬಗ್ಗೆ ಚರ್ಚಿಸುವುದು ಮತ್ತು ಮುಕ್ತಾಯ ಮಾಡುವ ಕುರಿತು ತೀರ್ಮಾನಿಸುವ ಸೌರ್ವಭೌಮತ್ವ ಅಧಿಕಾರ ಸದನಕ್ಕೆ ಇರುತ್ತದೆ. ಡಿ.19 ರಂದು ನಡೆದ ಘಟನೆಗೆ ಸಂಬಂಧಿಸಿ ಪರಾಮರ್ಶಿಸಿಕೊಂಡು ಪೀಠದ ತೀರ್ಪು ನೀಡಲಾಗಿದೆ. ಸದನದ ಆವರಣದ ಒಳಗೆ ಶಿಸ್ತು ಕಾಪಾಡುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಸಭಾಪತಿಗಿದೆ. ಸಭಾಪತಿಗೆ ಪ್ರದತ್ತವಾಗಿದೆ, ಸಭಾಪತಿ ತೀರ್ಪೇ ಇದರಲ್ಲಿ ಅಂತಿಮ ಎಂದು ತಿಳಿಸಿದ್ದಾರೆ.

ಶಾಸಕಾಂಗಕ್ಕೆ ಮತ್ತು ಸಭಾಪತಿಯವರಿಗೆ ಪ್ರದತ್ತವಾದ ವಿಶೇಷ ಅಧಿಕಾರಕ್ಕೆ ಚ್ಯುತಿ ಬರುವಂತೆ ಕಾರ್ಯಾಂಗವು ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಸಾಂವಿಧಾನಿಕ ಸಂಘರ್ಷಣೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಭಾಸವಾಗುತ್ತಿದೆ. ವಿನಾಕಾರಣ ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಸಂಘರ್ಷದ ಪ್ರಮೇಯ ನಿರ್ಮಾಣ ಆಗಬಾರದು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಭಾಪತಿಯವರ ಕಾರ್ಯವ್ಯಾಪ್ತಿಗೆ ಬರುತ್ತೆಂದು ತಮಗೆ ತಿಳಿದಿರುವ ವಿಚಾರ. ಕಾರ್ಯಾಂಗ ಮತ್ತು ಶಾಸಕಾಂಗದ ನಾವಿಬ್ಬರೂ ಪರಸ್ಪರ ಗೌರವದೊಂದಿಗೆ. ನಮ್ಮ ನಮ್ಮ ಕರ್ತವ್ಯ ನಿರ್ವಹಿಸಬೇಕಿದೆ. ತಾವೂ ಸಂವಿಧಾನದ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವುಳ್ಳವರು, ಸಂವಿಧಾನದ ಅಡಿಯಲ್ಲೇ ಕರ್ತವ್ಯವನ್ನು ನಿರ್ವಹಿಸುತ್ತೀರಿ ಎಂಬ ವಿಶ್ವಾಸ ಇದೆ. ಸಭಾಪತಿಯವರ ಹಕ್ಕುಗಳನ್ನು, ಸದನದ ಸಾರ್ವಭೌಮತ್ವ ಗಮನದಲ್ಲಿಟ್ಟುಕೊಂಡು ಪ್ರಕರಣವನ್ನು ನಿರ್ವಹಿಸುತ್ತೀರಿ ಎಂದು ನಂಬುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

RELATED ARTICLES
- Advertisment -
Google search engine

Most Popular