Sunday, April 20, 2025
Google search engine

Homeರಾಜ್ಯಅಂಬೇಡ್ಕರ್ ಆಶಯದಂತೆ ಪ್ರಧಾನಿ ಮೋದಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ

ಅಂಬೇಡ್ಕರ್ ಆಶಯದಂತೆ ಪ್ರಧಾನಿ ಮೋದಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮಾಜದ ಸಂಕೇತವಾಗಿದೆ ಎಂದರು.

ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ ಬಹಳ ಅಪಚಾರವಾಗಿತ್ತು. ಅದನ್ನು ಸರಿಪಡಿಸಿ ಮನುಕುಲ ಇರುವವರೆಗೂ ಬಾಬಾ ಸಾಹೇಬ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು.

ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ, ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ಅವರು ಮಾಡಿದ್ದರು ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular