Sunday, April 20, 2025
Google search engine

Homeರಾಜ್ಯಸುದ್ದಿಜಾಲಕಂಬಳ ಕ್ರೀಡೆಗೆ ಜಾತಿ - ಧರ್ಮದ ಬೇಲಿ ಇಲ್ಲ; ಇದು ಸರ್ವರ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಂಬಳ ಕ್ರೀಡೆಗೆ ಜಾತಿ – ಧರ್ಮದ ಬೇಲಿ ಇಲ್ಲ; ಇದು ಸರ್ವರ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು (ದಕ್ಷಿಣ ಕನ್ನಡ): ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ ಎಂದರು.

ನಕ್ಸಲರು ಮುಖ್ಯವಾಹಿನಿಗೆ ಬರಬೇಕು
ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಿದ್ದು, ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಕ್ಸಲರ ಶರಣಾಗತಿಯ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರು ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ ಎಂದರು.

RELATED ARTICLES
- Advertisment -
Google search engine

Most Popular