Wednesday, April 16, 2025
Google search engine

Homeಅಪರಾಧಹಸುಗಳ ಕೆಚ್ಚಲು ಕೊಯ್ದ ಕೇಸ್ : ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡ ಆರೋಪಿ

ಹಸುಗಳ ಕೆಚ್ಚಲು ಕೊಯ್ದ ಕೇಸ್ : ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡ ಆರೋಪಿ

ಬೆಂಗಳೂರು : ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಟನ್ ಪೇಟೆ ಪೊಲೀಸರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಘಟನಾ ಸ್ಥಳದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು,  ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಆರೋಪಿ ಪ್ಲಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೃತ್ಯ ನಡೆದ ಜಾಗದಿಂದ 50 ಮೀಟರ್ ಅಂತರದಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಆರೋಪಿಯನ್ನು ಬಂಧಿಸಿ, ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ ಜನವರಿ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳ ಕ್ರೌರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಪಕ್ಷ ನಾಯಕ ಆರ್.ಅಶೋಕ್ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಚಾಮರಾಜಪೇಟೆಯ ವಿನಾಯಕನಗರದಲ್ಲಿ ಬೈ‍ಕ್ ನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಎಸ್ಕೇಪ್ ಆಗಿದ್ದರು. ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES
- Advertisment -
Google search engine

Most Popular