ಕೆ.ಆರ್.ನಗರ: ಕರ್ನಾಟಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ ಗ್ರಾಹಕರಿಗೆ ಸರಿಯಾದ ಸೌಲಭ್ಯವನ್ನು ನೀಡಿದೆ ಅಸಮರ್ಪಕವಾಗಿ ನಡೆದು ಕೊಳ್ಳುತ್ತಿದ್ದಾರೆ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಹಕ ಈ ಬ್ಯಾಂಕಿನಲ್ಲಿ ಸರಿಯಾದ ಸಿಬ್ಬಂದಿಗಳ ವ್ಯವಸ್ಥೆ ಇಲ್ಲದೆ ಸರಿಯಾದ ಸಮಯಕ್ಕೂ ವ್ಯವಹಾರವನ್ನ ನಡೆಸಲು ಅನುವು ಮಾಡಿಕೊಡದೆ ವ್ಯವಹಾರ ಸಂದರ್ಭದಲ್ಲಿ ಯಾವುದೇ ಸಿಬ್ಬಂದಿಗಳು ಹಾಜರಿರದೆ ನಮಗೆ ಸಾಕಷ್ಟು ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಇದನ್ನ ಸಂಬಂಧಪಟ್ಟ ಅಧಿಕಾರಿಗಳು ಅಧ್ಯಕ್ಷರು ಗಮನಹರಿಸಿ ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು . ಇಲ್ಲವಾದರೆ ಮುಂದಿನ ದಿನಗಳಲ್ಲಿ ಈ ಬ್ಯಾಂಕಿನೊಂದಿಗೆ ವ್ಯವಹಾರ ಮಾಡುವುದು ಕಷ್ಟಕರವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.