Saturday, April 19, 2025
Google search engine

Homeಅಪರಾಧಹಾಡಹಗಲೇ ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ದರೋಡೆ; ನಗ-ನಗದು ಕಳವು

ಹಾಡಹಗಲೇ ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ದರೋಡೆ; ನಗ-ನಗದು ಕಳವು

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಕೆಸಿರೋಡಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಲ್ಲಿ ದರೋಡೆ ನಡೆದಿದೆ. ಹಾಡಹಗಲೇ ಐದು ಮಂದಿಯ ತಂಡದಿಂದ ಕೃತ್ಯ ನಡೆದಿದೆ.

25-35 ವರ್ಷ ವಯಸ್ಸಿನ 5-6 ಜನರ ಗುಂಪಿನಿಂದ ಕೃತ್ಯ. ಮಾಸ್ಕ್ ಧರಿಸಿ ಪಿಸ್ತೂಲ್, ತಲ್ವಾರ್ ಮತ್ತು ಚಾಕು ಸೇರಿದಂತೆ ಶಸ್ತ್ರಾಸ್ತ್ರಗಳೊಂದಿಗೆ ಸಿಬ್ಬಂದಿಗೆ ಬೆದರಿಕೆ ಹಾಕಿ ಹಾಡಹಗಲೇ ದರೋಡೆ ಮಾಡಿದ್ದಾರೆ. ಘಟನೆಯ ಸಮಯದಲ್ಲಿ ಬ್ಯಾಂಕಲ್ಲಿ 4-5 ಉದ್ಯೋಗಿಗಳು ಇದ್ದರು. ಹಿಂದಿಯಲ್ಲಿ ಮಾತನಾಡುತ್ತಿದ್ದ ಆರೋಪಿಗಳು. ಚಿನ್ನದ ಆಭರಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಹೊಂದಿದ್ದ ಬ್ಯಾಂಕ್ ನಲ್ಲಿ ಲೂಟಿ ಮಾಡಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ಕದ್ದ ವಸ್ತುಗಳ ಮೌಲ್ಯ ಸುಮಾರು 10 ರಿಂದ 12 ಕೋಟಿ ನಷ್ಟಿದೆ .

ಅಪರಾಧಿಗಳು ಕಪ್ಪು ಫಿಯೆಟ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ .ಪ್ರಕರಣದ ತನಿಖೆ ನಡೆಸಲು ಮತ್ತು ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡ ರಚನೆ ಮಾಡಿದ್ದಾರೆ .ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular