Saturday, April 19, 2025
Google search engine

Homeರಾಜ್ಯಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ ಕಲಿಸ್ತೇವೆ: ರೇಣುಕಾಚಾರ್ಯ

ಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ ಕಲಿಸ್ತೇವೆ: ರೇಣುಕಾಚಾರ್ಯ

ಬೆಂಗಳೂರು: ಬಿಜೆಪಿಗೆ ನಿಮ್ಮನ್ನು ಕರೆತಂದವರು ಯಡಿಯೂರಪ್ಪ. ಅನಗತ್ಯವಾಗಿ ಬಿಎಸ್‌ವೈ ಅವರನ್ನು ಟೀಕೆ ಮಾಡಿದರೆ ನಾವು ಸಹಿಸಲ್ಲ. ಇನ್ಮುಂದೆ ಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ ಕಲಿಸ್ತೇವೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತಾಡಿರೋದು ನಮಗೆ, ಕಾರ್ಯಕರ್ತರಿಗೆ ನೋವು ತಂದಿದೆ. ನಿಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ ಇರಬೇಕು. ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಅಲ್ಲ. ಹೈಕಮಾಂಡ್‌ಗೂ ಭೇಟಿ ಮಾಡಿ ತಿಳಿಸ್ತೇವೆ. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ಒಂದು ತೀರ್ಮಾನ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪಕ್ಷ ಕಟ್ಟಿದ ಮಹಾನ್ ನಾಯಕ ಯಡಿಯೂರಪ್ಪ. ಅಂಬಾಸಿಡರ್ ಕಾರ್, ಕೆಎಸ್‌ಆರ್‌ಟಿಸಿ ಬಸ್, ಸೈಕಲ್‌ನಲ್ಲಿ ಓಡಾಡಿ ಪಕ್ಷ ಕಟ್ಟಿದ್ರು. 46 ನೇ ವಯಸ್ಸಿನಲ್ಲಿ ಯಡಿಯೂರಪ್ಪ ಅಧ್ಯಕ್ಷ ಆಗಿದ್ರು. ಒಬ್ಬರೇ ಶಾಸಕರಿದ್ದರೂ ಪಕ್ಷ ಕಟ್ಟಲು ಓಡಾಡಿದ್ರು. ಯಡಿಯೂರಪ್ಪ, ಅನಂತಕುಮಾರ್ ನಡುವೆ ಮನಸ್ತಾಪ ಇತ್ತು. ಅದನ್ನ ಪಕ್ಷದೊಳಗೆ ಚರ್ಚೆ ಮಾಡ್ತಿದ್ರು. ಯಡಿಯೂರಪ್ಪ ಪ್ರಶ್ನಾತೀತ ನಾಯಕ, ರಾಜ್ಯದ ಜನ ಬಯಸಿ ಸಿಎಂ ಮಾಡಿದ್ರು ಎಂದು ಹೇಳಿದ್ದಾರೆ.

ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಬೇಕಿತ್ತು. ಯಡಿಯೂರಪ್ಪ ವಿರುದ್ಧ ಕೆಲವರು ಮಾತಾಡ್ತಿದ್ದಾರೆ. ಸಂಘಪರಿವಾರದ ಅಭಿಪ್ರಾಯದ ಮೇಲೆ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ. ವಿಜಯೇಂದ್ರ ಸಾಮರ್ಥ್ಯ ನೋಡಿ ರಾಷ್ಟ್ರೀಯ ನಾಯಕರು ಅವಕಾಶ ನೀಡಿದ್ದಾರೆ. ಇವರು ಮಾತಾಡೋದು ವಿಜಯೇಂದ್ರ ವಿರುದ್ಧ ಅಲ್ಲ, ಮೋದಿ ವಿರುದ್ಧ, ರಾಷ್ಟ್ರೀಯ ನಾಯಕರ ವಿರುದ್ಧ. ಯಡಿಯೂರಪ್ಪ ಅವರನ್ನ ಟೀಕಿಸೋದು ಒಂದೇ, ರಾಷ್ಟ್ರೀಯ ನಾಯಕರನ್ನ ಟೀಕಿಸೋದು ಒಂದೆ ಎಂದು ಕಿಡಿಕಾರಿದ್ದಾರೆ.

RELATED ARTICLES
- Advertisment -
Google search engine

Most Popular