Sunday, April 6, 2025
Google search engine

Homeರಾಜ್ಯಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ : ಡಿಕೆ ಶಿವಕುಮಾರ್

ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ : ಡಿಕೆ ಶಿವಕುಮಾರ್

ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಅಗ್ರಹ ವಿಚಾರವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಮುಡಾದಲ್ಲಿ ರಾಜಕೀಯ ಮಾತನಾಡುವ ಅವಶ್ಯಕತೆ ಇಲ್ಲ. ಯಾವ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ. ಸಿದ್ದರಾಮಯ್ಯ ರಾಜೀನಾಮೆ ಯ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಮೊದಲು ಬಿಜೆಪಿ ಹಗರಣಗಳ ಬಗ್ಗೆ ಚರ್ಚೆ ಮಾಡೋಣ. ಬಿಜೆಪಿಯ ಹಗರಣಗಳು ಬಹಳ ಇವೆ ಅದರ ಬಗ್ಗೆ ಮೊದಲು ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

RELATED ARTICLES
- Advertisment -
Google search engine

Most Popular