Saturday, April 19, 2025
Google search engine

Homeರಾಜ್ಯಹೊಸ ಪಿಂಚಣಿ ವ್ಯವಸ್ಥೆ ರದ್ದತಿಗೆ ಒತ್ತಾಯಿಸಿ ಫೆ.7ರಂದು ಒಪಿಎಸ್ ಹಕ್ಕೊತ್ತಾಯ ಧರಣಿಗೆ ತೀರ್ಮಾನ

ಹೊಸ ಪಿಂಚಣಿ ವ್ಯವಸ್ಥೆ ರದ್ದತಿಗೆ ಒತ್ತಾಯಿಸಿ ಫೆ.7ರಂದು ಒಪಿಎಸ್ ಹಕ್ಕೊತ್ತಾಯ ಧರಣಿಗೆ ತೀರ್ಮಾನ

ಬೆಂಗಳೂರು: NPS ಯೋಜನೆಯ ರದ್ದತಿಗೆ ಒತ್ತಾಯಿಸಿ ಫೆ.7ರಂದು ‘OPS ಹಕ್ಕೊತ್ತಾಯ’ ಧರಣಿ ನಡೆಸಲು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀರ್ಮಾನಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು 2022ರ ಅ.13ರಿಂದ ಒಂದು ತಿಂಗಳು OPS ಸಂಕಲ್ಪ ಯಾತ್ರೆ ಹಾಗೂ 14 ದಿನಗಳ ಕಾಲ OPS ಜಾರಿಗಾಗಿ ಫ್ರೀಡಂ ಪಾರ್ಕ್‌ಲ್ಲಿ ಅಹೋ ರಾತ್ರಿ ಧರಣಿ ನಡೆಸಲಾಗಿತ್ತು. ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ NPS ಯೋಜನೆ ರದ್ದುಗೊಳಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಾಗಿತ್ತು ಎಂದಿದೆ.

ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ ತಕ್ಷಣ ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ 2023ರ ಜೂ.13ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಭರವಸೆ ನೀಡಿದ್ದರು. NPS ಯೋಜನೆಯನ್ನು ರದ್ದುಗೊಳಿಸುವ ಕುರಿತು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು. ಮುಖ್ಯಮಂತ್ರಿ 2024ರ ಜ.6 ರಂದು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮುಂದಿನ ಸಂಪುಟ ಸಭೆಯಲ್ಲಿ NPS ಯೋಜನೆಯ ರದ್ದತಿಯ ವಿಷಯವನ್ನು ಸಂಪುಟದ ಸಹದ್ಯೋಗಿಗಳೊಂದಿಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು ಎಂದು ಪ್ರಕಟಣೆಯಲ್ಲಿ ಸಂಘ ತಿಳಿಸಿದೆ.

ಆದರೆ, ಈ ನಡುವೆ ಕೇಂದ್ರ ಸರ್ಕಾರ NPS ಬದಲು UPS ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು, ಇದನ್ನು ರಾಷ್ಟ್ರ ಮಟ್ಟದಲ್ಲಿ NMOPS ಮತ್ತು ರಾಜ್ಯದಲ್ಲಿ ನಮ್ಮ ಸಂಘಟನೆ ಈ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ನಮ್ಮ ಬೇಡಿಕೆ ಕೇವಲ ಹಳೆ ಪಿಂಚಣೆ ಯೋಜನೆಯನ್ನು ಮರುಜಾರಿಗೊಳಿಸುವುದಾಗಿದೆ. ಈ ನಡುವೆ ರಾಜ್ಯ ಸರ್ಕಾರ ಕೆಲವು ರಾಜ್ಯಗಳಲ್ಲಿ OPS ಜಾರಿಗೊಳಿಸಿದ್ದು, ಸಿದ್ದರಾಮಯ್ಯ ಆ ರಾಜ್ಯಗಳಿಗೆ ಭೇಟಿ ನೀಡಿ ವರದಿ ಪಡೆದು ಪರಿಶೀಲಿಸುವ ಬಗ್ಗೆ ಸಮಿತಿ ರಚಿಸಿದ್ದು, ಸರ್ಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ವಿರೋಧಿಸಿದೆ.

RELATED ARTICLES
- Advertisment -
Google search engine

Most Popular