Saturday, April 19, 2025
Google search engine

HomeUncategorizedರಾಷ್ಟ್ರೀಯರಾಜಸ್ಥಾನದ ಜೈಪುರದ 3 ಭಾಗಗಳಲ್ಲಿ 3 ಬಾರಿ ಕಂಪಿಸಿದ ಭೂಮಿ

ರಾಜಸ್ಥಾನದ ಜೈಪುರದ 3 ಭಾಗಗಳಲ್ಲಿ 3 ಬಾರಿ ಕಂಪಿಸಿದ ಭೂಮಿ

ಜೈಪುರ: ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ ಇಂದು ಮುಂಜಾನೆ 30 ನಿಮಿಷಗಳ ಅವಧಿಯಲ್ಲಿ ಮೂರು ಬಾರಿ ಭೂಮಿ ಕಂಪಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

ಶುಕ್ರವಾರ ನಸುಕಿನ ಜಾವಾ 4 ಗಂಟೆಯಿಂದ 4;30 ನಿಮಿಷಗಳ ಅವಧಿಯಲ್ಲಿ ಮೂರು ಕಂಪನಗಳು ಸಂಭವಿಸಿದೆ ಎಂದು ಹೇಳಲಾಗಿದೆ.

ಅದರಲ್ಲಿ 4.09ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4.22ರ ಸುಮಾರಿಗೆ 3.1 ರ ತೀವ್ರತೆ ಹಾಗೂ 4.25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನದ ಅನುಭವಾಗಿದೆ ಎನ್ನಲಾಗಿದೆ.

ಕಂಪನದ ಅನುಭವವಾಗುತ್ತಿದ್ದಂತೆ ಜನ ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ, ಭೂಕಂಪನದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಮಣಿಪುರದಲ್ಲಿ 3.5 ತೀವ್ರತೆಯ ಭೂಕಂಪ:

ಶುಕ್ರವಾರ ಮುಂಜಾನೆ ಸುಮಾರು 5.01ಕ್ಕೆ ಮಣಿಪುರದ ಉಖ್ರುಲ್‌ ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular