Saturday, April 19, 2025
Google search engine

Homeರಾಜ್ಯಕುರುಬ ಸಮುದಾಯ ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು

ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು

ಬೆಂಗಳೂರು: ರಾಜ್ಯದ ಮೂರನೇ ಅತಿದೊಡ್ಡ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರಕಾರ ಗುರುವಾರ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.

ಮೈಸೂರಿನ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸಂಶೋಧನ ಸಂಸ್ಥೆ ಈ ಸಂಬಂಧ ಸುದೀರ್ಘ‌ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಸರಕಾರ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ವರದಿಯಂತೆ ಕುರುಬ ಸಮುದಾಯವನ್ನು ಪ.ಪಂಗಡಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ವರದಿಯೊಂದಿಗೆ ಕೇಂದ್ರ ಸರಕಾರದ ಪರಿಶಿಷ್ಟ ಪಂಗಡ ವ್ಯವಹಾರಗಳ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.

ಕುರುಬ ಸಮುದಾಯಗಳ ಒತ್ತಾಯದ ಮೇರೆಗೆ 2017ರಲ್ಲಿ ಆ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದರು. 2019ರಲ್ಲಿ ಕುಲಶಾಸ್ತ್ರ ಅಧ್ಯಯನಕ್ಕೆ ಹಣ ಬಿಡುಗಡೆ ಮಾಡುವುದರೊಂದಿಗೆ ಪರಿಶಿಷ್ಟ ಪಂಗಡಗಳ ಸಂಶೋಧನ ಸಂಸ್ಥೆಗೆ ವಹಿಸಲಾಗಿತ್ತು. ಇದು 2023ರ ಮಾರ್ಚ್‌ ನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು.

ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂಬುದು ದಶಕಗಳ ಹಿಂದಿನ ಆಗ್ರಹ. ಪಾದಯಾತ್ರೆ ಕೂಡ ಮಾಡಿದ್ದೆವು. ಅದಕ್ಕೆ ಈಗ ಫ‌ಲ ಸಿಕ್ಕಿದೆ.

– ನಿರಂಜನಾನಂದಪುರಿ ಸ್ವಾಮೀಜಿ, ಕನಕ ಗುರುಪೀಠದ ಜಗದ್ಗುರು, ಕಾಗಿನೆಲೆ

RELATED ARTICLES
- Advertisment -
Google search engine

Most Popular