Saturday, April 19, 2025
Google search engine

Homeರಾಜ್ಯಲೋಕಸಭಾ ಕ್ಷೇತ್ರದ ಮರು ಚುನಾವಣೆಗೆ ಕೋರಿ ಅರ್ಜಿ : ಯದುವೀರ್ ಗೆ ಹೈಕೋರ್ಟ್ ನೋಟಿಸ್

ಲೋಕಸಭಾ ಕ್ಷೇತ್ರದ ಮರು ಚುನಾವಣೆಗೆ ಕೋರಿ ಅರ್ಜಿ : ಯದುವೀರ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ರೇವತಿ ರಾಜ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ವಿಚಾರವಾಗಿ ಅವರು  ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಸಂಸದ ಯದುವೀರ್‌ ಒಡೆಯರ್‌ ಗೆ ನೋಟಿಸ್ ಜಾರಿ ಮಾಡಿದೆ.

ಹೌದು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ಬಹುಜನ ಸಮಾಜವಾದಿ ಪಕ್ಷದ ನಾಮಪತ್ರ ತಿರಸ್ಕೃತ ಅಭ್ಯರ್ಥಿ ರೇವತಿ ರಾಜ್‌ ಸಲ್ಲಿಸಿರುವ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್‌ ಸಂಸದ ಯದುವೀರ್‌ ಒಡೆಯರ್‌ ಅವರಿಗೆ ನಿನ್ನೆ ನೋಟಿಸ್‌ ಜಾರಿಗೊಳಿಸಿದೆ.

ಪ್ರಕರಣ ಹಿನ್ನೆಲೆ: 2024ರ ಏಪ್ರಿಲ್ 4ರಂದು ರೇವತಿ ರಾಜ್ ಆಯೋಗಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಏಪ್ರಿಲ್ 5ರ ಬೆಳಿಗ್ಗೆ 11 ಗಂಟೆಯ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ನಾಮಪತ್ರ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಸೂಚಿಸಿದ್ದರು. ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಿದ್ದರೂ ತಮ್ಮ ನಾಮಪತ್ರ ತಿರಸ್ಕರಿಸಲಾಗಿದೆ.ಈ ಸಂಬಂಧ ರಾಜ್ಯ ಮಖ್ಯ ಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ತಮ್ಮ ನಾಮಪತ್ರವನ್ನು ಚುನಾವಣಾ ಆಯೋಗ‌ ತಿರಸ್ಕರಿಸುವುಕ್ಕೆ ಆಕ್ಷೇಪಿಸಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ರೇವತಿ ರಾಜ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಜಿ ಪಂಡಿತ್‌ ಅವರ ಏಕಸದಸ್ಯ ಪೀಠವು ನಡೆಸಿತು.

ತಮ್ಮ ನಾಮಪತ್ರ ತಿರಸ್ಕರಿಸಿದ್ದ ಅಂದಿನ ಚುನಾವಣಾಧಿಕಾರಿ ಕೆ.ವಿ ರಾಜೇಂದ್ರ ಅವರ ಆದೇಶವನ್ನು ಬದಿಗೆ ಸರಿಸಬೇಕು. ಯದುವೀರ್‌ ಆಯ್ಕೆ ಅಸಿಂಧುಗೊಳಿಸಿ, ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಹೊಸದಾಗಿ ಚುನಾವಣೆ ನಡೆಸಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ವೇಳೆ ಸಂಸದ ಯದುವೀರ್ ಒಡೆಯರ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು.

RELATED ARTICLES
- Advertisment -
Google search engine

Most Popular