Saturday, April 19, 2025
Google search engine

Homeಅಪರಾಧಅಂಕೋಲ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ

ಅಂಕೋಲ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ

ಕಾರವಾರ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.

ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸರಿಗೆ ಸಾರ್ವಜನಿಕರಿಂದ ಮಾಹಿತಿ ಸಿಗುತ್ತಿದ್ದಂತೆ ಪರಿಶೀಲನೆಗೆ ಬಂದ ಪೊಲೀಸರು ಕಾರಿನ ಬಾಗಿಲು ಓಪನ್ ಮಾಡಿ ಪರಿಶೀಲನೆ ನಡೆಸಿದ ವೇಳೆ ಕಾರಿನಲ್ಲಿ ಕಬ್ಬಿಣದ ಬಾಕ್ಸ್ ಸಿಕ್ಕಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ 1.15 ಕೋಟಿ ಹಣ ಇರುವುದು ಕಂಡುಬಂದಿದೆ.

ಕೆಎ 51 ಎಮ್‌ಬಿ 9634 ನಂಬರ್ ಪ್ಲೇಟಿನ ಕಾರು ಇದಾಗಿದೆ. ಕಾರಿನ ರಿಜಿಸ್ಟ್ರೇಷನ್ ನಂಬರ್ ಅನ್ನು ಪರಿಶೀಲಿಸಿದಾಗ ಆಲ್ಟ್ರೋಜ್ ಕಾರು ಎಂದು ತೋರಿಸಿದ್ದು, ಮಡಿಕೇರಿ ಆರ್‌ಟಿಓ ಪಾಸಿಂಗ್ ಹೊಂದಿದೆ. ಅಸಲಿಗೆ ಇದು ಕ್ರೇಟಾ ಕಾರಾಗಿದ್ದು, ಈ ಕಾರಿನ ಬಾನೆಟ್, ಡಿಕ್ಕಿ ತೆರೆದ ಸ್ಥಿತಿಯಲ್ಲಿದ್ದು, ಕಾರಿನ ಸೀಟ್ ಕಿತ್ತು ಹೊರಗೆ ಬಿದ್ದಿರುವ ಸ್ಥಿತಿಯಲ್ಲಿ ಹಾಗೂ ಕಿಟಕಿ ಗಾಜುಗಳು ಒಡೆದ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಸದ್ಯ ಅಂಕೋಲ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದು ,ಯಾವುದೋ ದರೋಡೆ ಮಾಡಿ ಹಣ ಸಾಗಿಸುತ್ತಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular