ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮೊನ್ನೆ ಇಹಲೋಕ ತ್ಯಜಿಸಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಅವರ ಶ್ರದ್ಧಾಂಜಲಿ ಸಭೆಯ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ ನಡೆಯಿತು. ಇವರು ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಮೊದಲ ಬಾರಿಗೆ ಪತ್ರಿಕೆ ಮೂಲಕ ಪರಿಚಯಿಸಿದ್ದರು.
ಇದೇ ವೇಳೆ ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮಾತನಾಡಿ, ಕಿತ್ತಳೆ ಮಾರುತ್ತಿದ್ದ ನನ್ನನ್ನು ಮೊದಲ ಬಾರಿಗೆ ಪರಿಚಯಿಸಿದ್ದು, ನಂತರ ಎಲ್ಲರೂ ಪರಿಚಯಿಸುವಂತೆ ಮಾಡಿದ್ದು ಗುರುವಪ್ಪ ಬಾಳೆಪುಣಿ. ಅಂದಿನಿಂದ ಇಲ್ಲಿವರೆಗೆ ನನ್ನ ಎಲ್ಲ ಕಷ್ಟ ಸುಖಗಳಿಗೆ ಬಾಳೆಪುಣಿ ಬೆನ್ನೆಲುಬಾಗಿದ್ದರು. ನನ್ನ ಈಗಿನ ಎಲ್ಲ ಏಳೆಗೆ ಮೂಲ ಕಾರಣ ಬಾಳೆಪುಣಿಯವರು ನನ್ನ ಬಗ್ಗೆ ಮೊದಲು ಬರೆದ ಲೇಖಕ. ಅವರು ಬೇಗನೆ ಇತಲೋಕ ತ್ಯಜಿಸಿರುವುದು ತುಂಬಲಾರದ ನಷ್ಟ ಎಂದರು.