ನವದೆಹಲಿ: ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ. ಬಡತವನ್ನು ನಿರ್ಮೂಲನೆ ಗೊಳಿಸಿ, ಗುಣಮಟ್ಟದ ಜೀವನಶೈಲಿಗೆ ಆದ್ಯತೆ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಟಿ, ಮಹಿಳಾ, ಮಕ್ಕಳ ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಗಮನ ಹರಿಸಿ ಬಜೆಟ್ ಮಂಡಿಸುತ್ತಿರುವುದಾಗಿ ಹೇಳಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಆಹಾರದಲ್ಲಿ ಪೌಷ್ಟಿಕಾಂಶಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ ಪ್ರಕಟಿಸಿದ ಸಚಿವೆ, ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ. ಹಣ್ಣು ಮತ್ತು ತರಕಾರಿ ಬೆಳೆಗೆ ಪ್ರೊತ್ಸಾಹ ನೀಡಲಾಗುವುದು. ಧನಧಾನ್ಯ ಯೋಜನೆಯಡಿ ನೂರು ಜಿಲ್ಲೆಗಳನ್ನು ಕೇಂದ್ರೀಕರಿಸಿ ಯೋಜನೆ. ಕೃಷಿ ಉತ್ಪನ್ನಗಳ ಬೆಳವಣಿಗೆಗೆ ಆದ್ಯತೆ, ನೀರಾವರಿ, ಹಾಗೂ ಸ್ಟೋರೆಜ್ ಗಳ ನಿರ್ಮಾಣ ಮಾಡುವ ಮೂಲಕ 1.7 ಕೋಟಿ ರೈತರಿಗೆ ಅನುಕೂಲ ಕಲ್ಪಿಸುವುದಾಗಿ ತಿಳಿಸಿದ್ದಾರೆ.
ಅಂಡಮಾನ್, ನಿಕೋಬಾರ್ ಗುರಿಯಾಗಿಸಿಕೊಂಡು ಮೀನುಗಾರಿಕೆಗೆ ಒತ್ತು ನೀಡಿ ವಿಶೇಷ ವಲಯ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.