Sunday, April 20, 2025
Google search engine

Homeಅಪರಾಧ45 ಸಾವಿರ ಮೌಲ್ಯದಗಾಂಜಾ ವಶ: ಬಂಧನ

45 ಸಾವಿರ ಮೌಲ್ಯದಗಾಂಜಾ ವಶ: ಬಂಧನ

ಮೈಸೂರು : ಖಚಿತ ಮಾಹಿತಿ ಮೇರೆಗೆ ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ೪೫ ಸಾವಿರ ರೂ. ಮೌಲ್ಯದ
೧ ಕೆಜಿ ೧೧೦ ಗ್ರಾಂ ಗಾಂಜಾ ವಶಕ್ಕೆ ಪಡೆದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ ಜ.೩೦ ರಂದು ವಿಜಯನಗರ ಪೊಲೀಸ್ ಠಾಣೆಯ ಸರಹದ್ದು ಹಿನಕಲ್ ಪ್ಲೈ ಓವರ್‌ನಿಂದ ಬೋಗಾದಿ ಕಡೆಗೆ
ಹೋಗುವ ರಿಂಗ್ ರಸ್ತೆಯಲ್ಲಿ ಗಸ್ತಿನಲ್ಲಿರುವಾಗ ಆರೋಪಿಗಳು ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡಲು
ಪಯತ್ನಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular