Saturday, April 19, 2025
Google search engine

Homeರಾಜ್ಯಇಂದು ಸುಗ್ರೀವಾಜ್ಞೆ ಜಾರಿಗೆ ರಾಜ್ಯಪಾಲರು ಅಂಕಿತ ಹಾಕುವ ಸಾಧ್ಯತೆ : ಸಚಿವ ಜಿ.ಪರಮೇಶ್ವರ್

ಇಂದು ಸುಗ್ರೀವಾಜ್ಞೆ ಜಾರಿಗೆ ರಾಜ್ಯಪಾಲರು ಅಂಕಿತ ಹಾಕುವ ಸಾಧ್ಯತೆ : ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಈ ಹಿಂದೆ ಶಿಕ್ಷೆ ಮೂರು ವರ್ಷ ಬಿಟ್ಟು ಈಗ 10 ವರ್ಷ ಮಾಡಿದ್ದೇವೆ. ದಂಡದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು. ಕಾನೂನಿನ ತೊಡಕುಗಳನ್ನು ಸರಿಪಡಿಸಿದ್ದೇವೆ. ಕಾನೂನಿನ ತೊಂದರೆ ಬರುವುದಿಲ್ಲ ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು.

ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿಕೆ ಕುರಿತಾಗಿ ಮಂಕಾಳು ವೈದ್ಯ ವಯಕ್ತಿಕವಾಗಿ ಹೇಳಿರುತ್ತಾರೆ. ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿರುವ ವಿಚಾರವಾಗಿ ಆ ಬಗ್ಗೆ ನನಗೆ ಗೊತ್ತಿಲ್ಲ ಏನಾದರೂ ದೂರು ಬಂದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕ್ರಮವಾಗುತ್ತಿದೆ ಅಷ್ಟೇ ಎಂದು ತಿಳಿಸಿದರು.

ಇನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಈ ಕುರಿತು ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನು ಒಂದು ತಿಂಗಳು ಸಮಯವಿದೆ ನೋಡೋಣ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

RELATED ARTICLES
- Advertisment -
Google search engine

Most Popular