Tuesday, April 8, 2025
Google search engine

Homeರಾಜಕೀಯರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವ ಕಾಂಗ್ರೆಸ್: ಮಾಜಿ ಸಿಎಂ ಬೊಮ್ಮಾಯಿ

ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವ ಕಾಂಗ್ರೆಸ್: ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ: ಕಾಂಗ್ರೆಸ್ ​ನವರು ರಾಜ್ಯದ ಜನರನ್ನು ಸಂಕಷ್ಟದಲ್ಲಿ ಸಿಲುಕಿಸುತ್ತಿದ್ದಾರೆ. ಎಷ್ಟು ವಿದ್ಯುತ್ ಬಳಕೆ ಮಾಡಬೇಕೆಂಬ ಅಧಿಕಾರ ಪ್ರತಿ ಪ್ರಜೆಗಿದೆ. ಇವರು ಸರಾಸರಿ ಲೆಕ್ಕದಲ್ಲಿ ಗ್ರಾಹಕರು ಬಳಸುವ ವಿದ್ಯುತ್ ಮೇಲೂ ಹಿಡಿತ ಸಾಧಿಸುತ್ತಿದ್ದಾರೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಕಾಂಗ್ರೆಸ್​ ನವರು ಹೆಸ್ಕಾಂ ಮೇಲೆ ದೊಡ್ಡ ಹೊರೆ ಹಾಕಿದ್ದರು. ಒಟ್ಟು ಬಿಲ್​​ ನಲ್ಲಿ 50 ಪರ್ಸೆಂಟ್​​​ ಬಿಲ್ ಸರ್ಕಾರದಿಂದ ಬರುತ್ತದೆ. ಹಳೇ ಬಾಕಿ ಅಂತಾ ಪುಕ್ಕಟೆ ಹೊರಯನ್ನು ಜನರ ಮೇಲೆ ಹಾಕಿದ್ದರು ಎಂದರು.

ನಾನು ಸಿಎಂ ಆಗಿದ್ದಾಗ ದೊಡ್ಡ ಪ್ರಮಾಣದ ಅನುದಾನ ನೀಡಿದ್ದೆ. 13 ಸಾವಿರ ಕೋಟಿ ರೂಪಾಯಿ ನೀಡಿ ಅದಕ್ಕೆ ಪುನಶ್ಚೇತನ ನೀಡಿದ್ದೆವು. ಕಾಂಗ್ರೆಸ್ ಪಕ್ಷಕ್ಕೆ ಇದು ಗೊತ್ತಿಲ್ಲಾ ಅಂತೇನಿಲ್ಲಾ‌‌ ಎಂದು ಹೇಳಿದ ಬೊಮ್ಮಾಯಿ, ಇದು ಜನರಿಗೆ ಮಾಡಿರುವ ಒಂದು ದೋಖಾ. ಕಾಂಗ್ರೆಸ್ ಸರ್ಕಾರ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದನ್ನ ಮಾಡುತ್ತಿದೆ ಎಂದರು.

ಇದನ್ನೂ ಓದಿ…ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಕ್ಕೆ ನಿಮಗೆ ಉಚಿತಗಳು ಸಿಕ್ಕಿವೆ: ಡಿಕೆಶಿ

ಅತೀ ಶೀಘ್ರದಲ್ಲಿ ಕರ್ನಾಟಕದಲ್ಲಿ ಎಮರ್ಜೆನ್ಸಿ ಬರುತ್ತೆ:

ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಮಾಡುವುದಾಗಿ ಹೇಳಿದ ಸಚಿವರ ಬಗ್ಗೆ ಮಾತನಾಡಿದ ಬೊಮ್ಮಾಯಿ, ಸಚಿವರು ಯಾವ ಉದ್ದೇಶ ಇಟ್ಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಗೋ ಹತ್ಯೆ ನಿಷೇಧ ಕಾನೂನು ತಂದಿರುವ ಉದ್ದೇಶ ಗೋ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಅಂತ. ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಮಾಡಿದರೆ ಕಾಂಗ್ರೆಸ್ ​ಗೆ ಆಪತ್ತು ಕಾದಿದೆ. ಈ ಸರ್ಕಾರಕ್ಕೆ ಅಧಿಕಾರದ ಅಮಲು ಬಂದಿದೆ. ಪ್ರತಿಯೊಬ್ಬ ವ್ಯಕ್ತಿಯ ವಾಕ್ ಸ್ವಾತಂತ್ರ್ಯ ಮೊಟಕು ಗೊಳಿಸುತ್ತಿದ್ದಾರೆ. ಅತೀ ಶೀಘ್ರದಲ್ಲಿ ಕರ್ನಾಟಕದಲ್ಲಿ ಎಮರ್ಜೆನ್ಸಿ ಬರುತ್ತದೆ. ನಾವು ವಿರೋಧ ಪಕ್ಷವಾಗಿ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಯಾರನ್ನ ಜೈಲಿಗೆ ಹಾಕುತ್ತೀರೋ ಹಾಕಿ ನಿಮಗೆ ಜೈಲುಗಳು ಸಾಕಾಗುವುದಿಲ್ಲ ಎಂದು ಕಿಡಿಕಾರಿದರು.

ವಿವೇಕ ಯೋಜನೆ ನಿಲ್ಲಿಸಿದರೆ ಹೋರಾಟ ನಿಶ್ಚಯ:

ವಿವೇಕ ಯೋಜನೆ ನಿಲ್ಲಿಸಬಾರದು ಅದು ಬಿಜೆಪಿಯ ಯೋಜನೆ ಅಲ್ಲ. ಇದಕ್ಕಾಗಿ ಈಗಾಗಲೇ ಎಂಟು ಸಾವಿರ ಕೊಠಡಿ ನಿರ್ಮಾಣಕ್ಕೆ ಮುಂದಾಗಿದೆ. ಸಿದ್ದರಾಮಯ್ಯ ಏನೂ ನಿರ್ಣಯ ಮಾಡುತ್ತಾರೋ ನೋಡೋಣ ಅದರ ಮೇಲೆ ನಮ್ಮ ಹೋರಾಟ ನಿಶ್ಚಯ ಆಗಲಿದೆ ಎಂದರು.

RELATED ARTICLES
- Advertisment -
Google search engine

Most Popular