ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕ ಎಂದು ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ತಿಳಿಸಿದರು.
ಪಟ್ಟಣದ ಮಲೆ ಮಹದೇಶ್ವರ ಸ್ವಾಮಿ ರೋಡ್ ರಾಜಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು, ಭಾರತೀಯ ಸಂಸ್ಕೃತಿಯಲ್ಲಿ ದೇವಾಲಯಗಳಿಗೆ ವಿಶೇಷ ಸ್ಥಾನವಿದೆ, ದೇವಾಲಯಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಪ್ರತಿಬಿಂಬವಾಗಿವೆ ಇವುಗಳನ್ನು ಉಳಿಸಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಕರ್ತವ್ಯ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಆಧ್ಯಾತ್ಮಿಕತೆ ಮೈಗೂಡಿಸಿಕೊಂಡು ನಿತ್ಯವೂ ದೇವರ ಸೇವೆ ಮಾಡಿ ಧಾರ್ಮಿಕ ಚಿಂತನೆಗಳಿಂದ ಮನಸ್ಸಿಗೆ ನೆಮ್ಮದಿ ಮತ್ತು ಶಾಂತಿ ದೊರೆಯುತ್ತದೆ ಎಂದರು.
ಈ ಸಂದರ್ಭ ಆಶ್ರಯ ಸಮಿತಿ ಅಧ್ಯಕ್ಷರಾದ ನಿತಿನ್ ವೆಂಕಟೇಶ್, ಪುರಸಭೆ ಹಾಗು ಸಮಿತಿ ಸದಸ್ಯರಾದ ಸುರೇಶ್, ಪಿ.ಕೆ ವೆಂಕಟೇಶ್, ಸೋಮಣ್ಣ, ನಾಗರಾಜ್, ಭಾಸ್ಕರ, ಸಂತೋಷ್, ಜ್ಞಾನೇಶ್, ಪಿ.ಡಿ ಪ್ರಸನ್ನ ಮುಖಂಡರಾದ ನಿತಿನ್, ಮಹೇಂದ್ರ , ಕೃಷ್ಣ , ಪಿ.ಮಹದೇವ್ ಸೇರಿ ಮತ್ತಿತರಿದ್ದರು.