Saturday, April 19, 2025
Google search engine

Homeರಾಜ್ಯಸುದ್ದಿಜಾಲಗೋಣಿ ಚೀಲ ಗೋದಾಮಿನಲ್ಲಿ ಬೆಂಕಿ ಆಕಸ್ಮಿಕ; ಅಪಾರ ನಷ್ಟ

ಗೋಣಿ ಚೀಲ ಗೋದಾಮಿನಲ್ಲಿ ಬೆಂಕಿ ಆಕಸ್ಮಿಕ; ಅಪಾರ ನಷ್ಟ

ಮಂಗಳೂರು ದಕ್ಷಿಣ ಕನ್ನಡ: ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಮಧ್ಯರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಡಕಬೈಲ್ ಎಂಬಲ್ಲಿ ನಡೆದಿದೆ.

ಈ ಘಟನೆಯಿಂದಾಗಿ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದ ಮನೆಗೂ ಬೆಂಕಿ ತಗುಲಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ.ತಡರಾತ್ರಿ ಘಟನೆ ಈ ಘಟನೆ ನಡೆದಿದ್ದು ಬೆಂಕಿ ನಂದಿಸಲು ಅಗ್ನಿ ಶಾಮಕದಳ ಹಾಗೂ ಸಾರ್ವಜನಿಕರು ಹರಸಾಹಸ ಪಡಬೇಕಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಪರಿಶೀಲಿಸಿದ್ರು.

RELATED ARTICLES
- Advertisment -
Google search engine

Most Popular