Saturday, April 19, 2025
Google search engine

Homeರಾಜ್ಯಸುದ್ದಿಜಾಲಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಂಜುಂಡಶೆಟ್ಟಿ ಆಯ್ಕೆ

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಂಜುಂಡಶೆಟ್ಟಿ ಆಯ್ಕೆ

ಯಳಂದೂರು: ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನೂರು ನಂಜುಂಡಶೆಟ್ಟಿ ಆಯ್ಕೆಯಾಗಿದ್ದಾರೆ.
ಈಚೆಗೆ ಆನ್‌ಲೈನ್‌ನಲ್ಲಿ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ೧೮,೦೨೭ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ಹಲವು ವರ್ಷಗಳಿಂದ ಪಕ್ಷದಲ್ಲಿ ನಾನು ಗುರುತಿಸಿಕೊಂಡಿದ್ದು ಪ್ರಾಮಾಣಿಕವಾಗಿ ಪಕ್ಷಕ್ಕೆ ದುಡಿಯುತ್ತಿದ್ದೆ.

ಈಗ ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಇನ್ನಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು, ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರು, ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು, ನನಗೆ ಮತ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular