ಹುಣಸೂರು: ಶ್ರೀ ಗುರುಲಿಂಗಜಂಗಮದೇವರ ಮಠದ ಮರಮ ಪೂಜ್ಯ ಶ್ರೀ ನಟರಾಜಸ್ವಾಮಿಗಳ 50ನೇ ವರ್ಷದ ಚರ ಪಟ್ಟಾಧಿಕಾರದ ಸುವರ್ಣ ಮಹೋತ್ಸವ ನಡೆಯಲಿದೆ ಎಂದು ಉದ್ಯಮಿ ಹರವೆ ಶ್ರೀಧರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಮಾಜ ಮುಖಿ ಕೆಲಸವನ್ನು ಮಾಡುತ್ತಾ ಹಾಗೂ ವಿಶೇಷ ಭಕ್ತರನ್ನು ವೊಂದಿರುವ ಗಾವಡಗೆರೆ ಮಠದಲ್ಲಿ ಬಹು ವರ್ಷಗಳ ನಂತರ ಚರ ಪಟ್ಟಾಧಿಕಾರದ ಜತೆಗೆ ಪೂಜಾ ವಿದಿ ವಿಧಾನಗಳು ದಿನಾಂಕ 13.02.14.02. 2025 ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದ್ದು. ಸುತ್ತಮುತ್ತಲಿನ ಗ್ರಾಮಸ್ಥರು, ಮಠದ ಭಕ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಎರಡು ದಿನದ ಕಾರ್ಯಕ್ರಮವು ತಾಲೂಕಿನ ಶಾಸಕರಾದ ಜಿ.ಡಿ.ಹರೀಶ್ ಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಭಾ ಉದ್ಘಾಟನೆಯನ್ನು ಕೇಂದ್ರ ರೈಲ್ವೆ ಸಚಿವ ಸೋಮಣ್ಣ ನೆರವೇರಿಸಲಿದ್ದಾರೆ. ಉಪಸ್ಥಿತಿ ವಿಧಾನ ಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ , ಗೌರವ ಅಭಿನಂದನೆಯನ್ನು ಶ್ರೀ ಶ್ರೀ ನಿಶ್ಚಲನಂದನಾಥ ಸ್ವಾಮಿಗಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ಸಮಾಜ ಕಲ್ಯಾಣ ಇಲಾಖೆ ಅಚಿವ ಹೆಚ್.ಸಿ. ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಶಾಸಕ ರವಿಶಂಕರ್, ಗುಂಡ್ಲು ಪೇಟೆ ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್, ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವೀರಶೈವ ಮುಖಂಡ ಕಲ್ಲಹಳ್ಳಿ ಶಿವಣ್ಷ ಮಾತನಾಡಿ, ಎರಡನೇ ದಿನ ಧಾರ್ಮಿಕ ಸಭೆ ಶುಕ್ರವಾರ ಬೆಳಿಗ್ಗೆ 10.30.ಕ್ಕೆ ಜರುಗಲಿದ್ದು. ದಿವ್ಯ ಸಾನಿಧ್ಯವನ್ನು ಸುತ್ತೂರು ಮಠದ ಶ್ರೀ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮಿಗಳು, ಶ್ರೀ ಆದಿಚುಂಚನಗಿರಿ ಮಠದ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಗಳು, ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು, ಶ್ರೀ ಶ್ರೀ ನಿರಂಜನಾನಂದಪುರಿ ಸ್ವಾಮಿಗಳು, ಶ್ರೀ ಪ್ರಸನ್ನಾನಂದಪುರಿ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.

ಶಾಲಾ ಕಟ್ಟಡ ಉದ್ಘಾಟನೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೆರವೇರಿಸಲಿದ್ದಾರೆ. ಕಾರ್ಯಕ್ರಮ ಉದ್ಘಾಟನೆ ಬಿಜೆಪಿ ರಾಜ್ಯಾಧ್ಯಾಕ್ಷ. ಬಿ.ವೈ.ವಿಜಯೇಂದ್ರ ವಹಿಸಲಿದ್ದು, ಘನ ಉಪಸ್ಥಿತಿ ಮೇಘಾಲಯ ರಾಜ್ಯಪಾಲ ಸಿ.ಹೆಚ್.ವಿಜಯ ಶಂಕರ್ , ಅಧ್ಯಕ್ಷತೆಯನ್ನು ಶಾಸಕ ಜಿ.ಡಿ.ಹರೀಶ್ ಗೌಡ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಸಾ.ರಾ.ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ. ಶಿವರಾಜ್ ತಂಗಡಿಯವರು ಭಾಗವಹಿಸಲಿದ್ದಾರೆ ಎಂದರು.
ಗುರುವಾರ ಸಂಜೆ 6..30. ಕ್ಕೆ ನಾಡಿನ ಹೆಸರಾಂತ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್ ಮತ್ತು ಜೀ ಕನ್ನಡ ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಹಾಗೂ ಅಂತರಾಷ್ಟ್ರೀಯ ಡ್ರಮ್ ವಾದಕ ಅರುಣ್ ಮತ್ತು ತಂಡದವರಿಂದ ವಾದ್ಯಗೋಷ್ಠಿ ನಡೆಯಲಿದ್ದು ಸಂಗೀತ ಪ್ರಿಯರು ಕಾರ್ಯಕ್ರಮದ ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ವೀರ ಶೈವ ಮುಖಂಡರಾದ ಜಗದೀಶ್, ಹೆಗ್ಗಂದೂರು ಶಿವಕುಮಾರ್ ಇದ್ದರು.