ಗುಂಡ್ಲುಪೇಟೆ: ತಾಲ್ಲೂಕಿನ ಗರಗನಹಳ್ಳಿ ಗೇಟಿನ ಹತ್ತಿರ ಬಳಿ ಪೆಟ್ರೋಲ್ ಬಂಕ್ ಸಮೀಪ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಬಿನ್ ನಂಜಪ್ಪ. (೫೫) ರಸ್ತೆ ದಾಟುವ ಸಂದರ್ಭದಲ್ಲಿ ಕೇರಳ ಮೂಲದ ಕೆಎಲ್ ೫೫ ಎಕೆ ೨೭೯೭ ಸ್ವಿಪ್ಟ್ ಕಾರು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಮೃತಪಟ್ಟಿದ್ದು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.