Sunday, April 20, 2025
Google search engine

Homeರಾಜ್ಯಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಕಾಂಗ್ರೆಸ್‌ಗೆ​ ಸೇರ್ಪಡೆ

ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಕಾಂಗ್ರೆಸ್‌ಗೆ​ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್.ಶಿವರಾಮೇಗೌಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸ್ವಾಗತಿಸಿದರು. ಎಲ್.ಆರ್. ಶಿವರಾಮೇಗೌಡ ಅವರ ಬೆಂಬಲಿಗರೂ ಕೂಡ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್​ ಸೇರಿದ್ದಾರೆ.ಎಲ್​ಆರ್​ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular