ನವದೆಹಲಿ: ರಾಷ್ಟ್ರ ರಾಜಧಾನಿಯ ಎನ್‌ಸಿಆರ್‌ನಲ್ಲಿ ಇಂದು ಮುಂಜಾನೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಅನೇಕ ನಿವಾಸಿಗಳು ಭಯದಿಂದ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ದೆಹಲಿ, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್ ಸೇರಿದಂತೆ ಹಲವು ಭಾಗಗಳಲ್ಲಿ ಭೂಕಂಪದ ಅನುಭವಾಗಿದ್ದು, ಭೂಕಂಪನ ಸಂಭವಿಸುತ್ತಿದ್ದಂತೆ ನಿದ್ದೆಯಲ್ಲಿದ್ದ ಜನ ಜೀವ ಭಯದಿಂದ ಮನೆಗಳಿಂದ ಹೊರ ಓಡಿ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ ಎನ್ನಲಾಗಿದೆ.
ನಿವಾಸಿಗಳಿಗೆ ಪ್ರಧಾನಿ ಮೋದಿ ಅಭಯ:
ಇನ್ನು ಭೂಕಂಪದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜನರು ಶಾಂತವಾಗಿರಿ ಜೊತೆಗೆ ಸುರಕ್ಷಿತ ಮುನ್ನೆಚ್ಚರಿಕೆಗಳನ್ನು ಪಾಲಿಸಿ, ಅಧಿಕಾರಿಗಳು ಪರಿಸ್ಥಿತಿಯನ್ನು ಕೂಲಂಕುಷವಾಗಿ ಗಮನಿಸುತ್ತಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ಧೈರ್ಯ ತುಂಬಿದ್ದಾರೆ.