ಮಂಡ್ಯ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಜನರಿಗೆ ದುಬಾರಿ ಬೆಲೆ ಏರಿಕೆ ಯೋಜನೆ ಕೊಟ್ಟಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ. ಹಿಟ್ಲರ್ ರೀತಿ ಕಾಂಗ್ರೆಸ್ ಸರ್ಕಾರ ವರ್ತಿಸುತ್ತಿದೆ. ಸ್ಪೀಕರ್ ಯುಟಿ ಖಾದರ್ ಅವರ ಏಕ ಪಕ್ಷಿಯ ನಿರ್ಧಾರ ಅನುಸರಿಸುತ್ತಿದ್ದಾರೆ. ತಕ್ಷಣವೇ ಕಾಂಗ್ರೆಸ್ ಸರ್ಕಾರ ಈ ದೌರ್ಜನ್ಯ ನಿಲ್ಲಿಸುವಂತೆ ಆಗ್ರಹಿಸಿದರು.
ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.