Saturday, April 19, 2025
Google search engine

Homeರಾಜ್ಯಮಹಾ ಕುಂಭ ಮೃತ್ಯುಕುಂಭವಾಗಿದೆ: ಮಮತಾ ಬ್ಯಾನರ್ಜಿ ಆರೋಪ

ಮಹಾ ಕುಂಭ ಮೃತ್ಯುಕುಂಭವಾಗಿದೆ: ಮಮತಾ ಬ್ಯಾನರ್ಜಿ ಆರೋಪ

ಕೊಲ್ಕತ್ತಾ: ಮಹಾಕುಂಭದಲ್ಲಿ ನಡೆದ ಕಾಲ್ತುಳಿತದ ಸಾವುಗಳಿಗೆ ಸಂಬಂಧಿಸಿದಂತೆ ಮತ್ತು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಜನಸಂದಣಿಯ ಅಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಹಾಕುಂಭವನ್ನು ಮೃತ್ಯು ಕುಂಭ ಎಂದು ಕರೆದಿರುವ ಮಮತಾ ಬ್ಯಾನರ್ಜಿ ವಿಐಪಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡಲಾಗುತ್ತಿದ್ದರೂ, ಬಡವರಿಗೆ ಅಗತ್ಯ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ರಾಷ್ಟ್ರವನ್ನು ವಿಭಜಿಸಲು ಧರ್ಮವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಕಾರ್ಯಕ್ರಮಕ್ಕೆ ಸರಿಯಾದ ಯೋಜನೆಯ ಕೊರತೆಯಿದೆ ಎಂದು ಅವರು ಆರೋಪಿಸಿದ್ದಾರೆ.ಶವಗಳನ್ನು ಮರಣೋತ್ತರ ಪರೀಕ್ಷೆಯಿಲ್ಲದೆ ಮಹಾಕುಂಭದಿಂದ ಪಶ್ಚಿಮ ಬಂಗಾಳಕ್ಕೆ ಕಳುಹಿಸಲಾಗಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular