ಬಾಗಲಕೋಟ: ಅಧಿವೇಶನದ ಕಲಾಪದಲ್ಲಿ ಬಿಜೆಪಿ ಶಾಸಕರ ಅಮಾನತ್ತು ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ನವನಗರದ ಜಿಲ್ಲಾಡಳಿತಭವನದ ಮುಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಬಿಜೆಪಿ ಪ್ರತಿಭಟಿಸಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಮುರಗೇಶ ನಿರಾಣಿ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಸೇರಿ ಬಿಜೆಪಿಯ ಜಿಲ್ಲಾ ನಾಯಕರು, ಕಾರ್ಯಕರ್ತರು ಭಾಗಿಯಾಗಿದ್ದರು.