ಬಾಗಲಕೋಟೆ: ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನಲೆಯಲ್ಲಿ ನದಿ ಪಾತ್ರಗಳಿಗೆ ತೆರಳದಂತೆ ಜಮಖಂಡಿ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.
ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು ಇನ್ನಷ್ಟು ನೀರು ಬರುವ ಸಾಧ್ಯತೆ ಇರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ್ರ, ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಜಮಖಂಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡಂಗುರ ಸಾರಿದ್ದಾರೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಜಮಖಂಡಿ, ರಬಕವಿ-ಬನಹಟ್ಟಿ ತಾಲೂಕುಗಳ ವ್ಯಾಪ್ತಿಯಲ್ಲಿ ಹರಿಯುವ ಕೃಷ್ಣಾ ನದಿಗೆ ಅಂದಾಜು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮೂರು ಲಕ್ಷ ಕ್ಯೂಸೆಕ್ ನೀರು ಬಂದಾಗ ಮಾತ್ರ ಅಪಾಯ ಎದುರಾಗಲಿದೆ. ಅಲ್ಲಿವರೆಗೂ ಪರಿಸ್ಥಿತಿ ಹತೋಟಿಯಲ್ಲಿದೆ ಎಂದ ಎಸಿ ಸಂತೋಷ ಕಾಮಗೌಡ್ರ ತಿಳಿಸಿದ್ದಾರೆ.