ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ: ಗ್ರಾಮಗಳಲ್ಲಿ ಆಯೋಜಿಸುವ ಆರೋಗ್ಯ ಶಿಬಿರಗಳ ಪ್ರಯೋಜನವನ್ನು ಪ್ರತಿಯೊಬ್ಬ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ತಾಲೂಕು ಕಾರ್ಮಿಕ ನಿರೀಕ್ಷಕ ಮಂಜುನಾಥ್ ಹೇಳಿದರು.
ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಇಲಾಖೆ ಪಿರಿಯಾಪಟ್ಟಣ ಹಾಗೂ ಕರ್ನಾಟಕ ರಾಜ್ಯ ನವೋದಯ ಕಟ್ಟಡ ಹಾಗೂ ಕೂಲಿ ಕಾರ್ಮಿಕರ ಸಂಘಟ ಸಹಯೋಗದಲ್ಲಿ ಗುರುವಾರ ಆಯೋಜಿಸಿದ ನೋಂದಾಯಿತ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು, ಕೆಲವೊಂದು ಕಾಯಿಲೆಗಳು ಮಾನವನಿಗೆ ಮಾರಕವಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಸಣ್ಣ ಜ್ವರವನ್ನು ನಿರ್ಲಕ್ಷ್ಯ ಮಾಡದೆ ಅರೋಗ್ಯದ ಮೇಲೆ ನಿಗಾವಹಿಸಬೇಕು. ಸರ್ಕಾರ ಹಾಗೂ ಇಲಾಖೆಯು ಇಂತಹ ಶಿಬಿರಗಳನ್ನು ಆಯೋಜಿಸರುವ ಮೂಲಕ ಆರೋಗ್ಯದ ಕಾಳಜಿ ಹೆಚ್ಚಿಸಿದೆ ಎಂದರು.
ಶಿಬಿರದಲ್ಲಿ ಸುಮಾರು 65ಕ್ಕೂ ಹೆಚ್ಚು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಅರೋಗ್ಯ ತಪಾಸಣೆ ಮಾಡಲಾಯಿತು. ಕಾರ್ಮಿಕ ಇಲಾಖೆಯ ಡಿಇಒ ಅಂಜಲಿ, ರಾಜ್ಯ ನವೋದಯ ಕಟ್ಟಡ, ಕೂಲಿ ಕಾರ್ಮಿಕರ ಸಂಘಟನೆ ತಾಲೂಕು ಅಧ್ಯಕ್ಷ ಪ್ರಕಾಶ್, ಸೇರಿದಂತೆ ಕಾರ್ಮಿಕ ಮುಖಂಡರು, ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಈ ಸಂದರ್ಭ ಇದ್ದರು.