Tuesday, April 8, 2025
Google search engine

Homeರಾಜ್ಯಹೋಟೆಲ್ ಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ : ಸಚಿವ ದಿನೇಶ್ ಗುಂಡೂರಾವ್ ಆದೇಶ

ಹೋಟೆಲ್ ಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ : ಸಚಿವ ದಿನೇಶ್ ಗುಂಡೂರಾವ್ ಆದೇಶ

ಬೆಂಗಳೂರು : ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ಲಾಸ್ಟಿಕ್ ಬಳಸಿದರೆ ವಿಧಿಸುವ ದಂಡ ಹಾಗೂ ಮುನ್ನೆಚ್ಚರಿಕೆ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಬೆಂಗಳೂರಿನ ಹಲವು ಕಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಿದ್ದಾರೆ. ಇಡ್ಲಿ ಮಾಡುವಾಗ ಮಾತ್ರವಲ್ಲದೇ , ಆಹಾರ ಬಡಿಸುವಾಗ ಮತ್ತು ಪ್ಯಾಕ್ ಮಾಡಿ ಕೊಡಲು ಕೂಡ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹೆಚ್ಚಾಗಿ ಬಳಸುವುದರಿಂ ಅವುಗಳು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸರ್ ಕಾರಕ ಅಂಶಗಳನ್ನು ಹೊರಸೂಸುತ್ತದೆ ಎಂದು ವರದಿಯೊಂದು ಹೇಳಿದೆ. ಈ ಹಿನ್ನೆಲೆ ಆರೋಗ್ಯ ಸಚಿವರು ಕ್ರಮ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular