ಬೆಂಗಳೂರು: ರಾಜಕೀಯ ಪ್ರೇರಿತ ಎಫ್ಐಆರ್ ಕಾರಣದಿಂದ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಜೆಡಿಎಸ್ ಆಗ್ರಹಿಸಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಸೂಚನೆ ಮೇರೆಗೆ ಸುಖಾಸುಮ್ಮನೆ ಸುಳ್ಳು ಕೇಸುಗಳನ್ನು ಹಾಕಿ ಅನಗತ್ಯವಾಗಿ ಕಿರುಕುಳ ನೀಡುತ್ತಾ ಜನಸಾಮಾನ್ಯರನ್ನು ಬಲಿ ಪಡೆಯಲಾಗುತ್ತಿದೆ ಎಂಬುದಾಗಿ ಕಿಡಿಕಾರಿದೆ.
ರಾಜಕೀಯ ಪ್ರೇರಿತ ಎಫ್ಐಆರ್ ಕಾರಣದಿಂದ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರಾಜಪೇಟೆ ಶಾಸಕ ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಮಂಥರ್ ಗೌಡ ಅವರ ದ್ವೇಷ ರಾಜಕಾರಣ, ಕಿರುಕುಳಕ್ಕೆ ಅಮಾಯಕ ಯುವಕನ ಬಲಿಯಾಗಿದೆ ಎಂದಿದೆ.
ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಹಾಳು ಗೆಡವಿರುವ ಕಾಂಗ್ರೆಸ್ ಸರ್ಕಾರ, ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದರೆ, ಸರ್ಕಾರದ ವೈಫಲ್ಯವನ್ನು ಟೀಕಿಸಿದವರ ಮೇಲೆ ಪೊಲೀಸರನ್ನು ಬಳಸಿಕೊಂಡು ಸುಳ್ಳು ಕೇಸ್‌ಗಳನ್ನು ಹಾಕಿ, ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಹೇಳಿದೆ.
ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಜಾತ್ಯಾತೀತ ಜನತಾದಳ ಪಕ್ಷವೂ ಆಗ್ರಹಿಸಿದೆ.