Saturday, April 19, 2025
Google search engine

Homeಅಪರಾಧಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಹಗರಣ : ಏಕಕಾಲಕ್ಕೆ 2 ಕಡೆ ಇಡಿ ಅಧಿಕಾರಿಗಳಿಂದ ದಾಳಿ

ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಹಗರಣ : ಏಕಕಾಲಕ್ಕೆ 2 ಕಡೆ ಇಡಿ ಅಧಿಕಾರಿಗಳಿಂದ ದಾಳಿ

ಶಿವಮೊಗ್ಗ : 2014 ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ದಾಳಿ ಮಾಡಿದೆ.

ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 8ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

2014ರ ಜೂನ್ ನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಈ ಒಂದು ಹಗರಣ ನಡೆದಿತ್ತು. ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಹಗರಣ ನಡೆದಿತ್ತು. ಆ ವೇಳೆ ಡಿಸಿಸಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶೋಭಾ ಆಗಿದ್ದರು. ಬ್ಯಾಂಕಿನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆಯ ಮೇಲು ರೇಡ್ ಮಾಡಲಾಗಿದ್ದು, ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿರುವ ವಿಡಿಯೋ ಅಧಿಕಾರಿಗಳ ತಂಡ ಇದೀಗ ಪರಿಶೀಲನೆ ನಡೆಸುತ್ತಿದೆ.

RELATED ARTICLES
- Advertisment -
Google search engine

Most Popular