Saturday, April 19, 2025
Google search engine

Homeರಾಜ್ಯದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ ಸ್ಥಾನ, ಯಾದಗಿರಿ ಕೊನೆ ಸ್ಥಾನ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ ಸ್ಥಾನ, ಯಾದಗಿರಿ ಕೊನೆ ಸ್ಥಾನ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% % ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%) ಪಡೆದುಕೊಂಡಿದೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಶ್ರೇಯಾ – 597 ಅಂಕ ಪಡೆದು ಮೊದಲ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ಉನ್ನತ ಶ್ರೇಣಿಯಲ್ಲಿ 1,00,571 ವಿದ್ಯಾರ್ಥಿಗಳು, ಪ್ರಥಮ ದರ್ಜೆ- 2,78,054, ದ್ವೀತಿಯ ದರ್ಜೆ-70969, ತೃತೀಯ ದರ್ಜೆಯಲ್ಲಿ-18845 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಇಂದು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.

RELATED ARTICLES
- Advertisment -
Google search engine

Most Popular